ನವದೆಹಲಿ : ಅಯೋಧ್ಯೆಯ ರಾಮ ಮಂದಿರವನ್ನು ಸೋಮವಾರ ಅಧಿಕೃತವಾಗಿ ಜಗತ್ತಿಗೆ ಅನಾವರಣಗೊಳಿಸುತ್ತಿದ್ದಂತೆ ಲಡಾಖ್ ನಲ್ಲಿ ಚೀನಾ ಸೈನಿಕರ ಜೊತೆ ಭಾರತೀಯ ಯೋಧರು ಸಂಭ್ರಮಾಚರಣೆ ಮಾಡಿದ್ದಾರೆ.
ಉಭಯ ದೇಶಗಳ ನಡುವಿನ ಉದ್ವಿಗ್ನತೆಯ ನಡುವೆ ಚೀನಾದ ಸೈನಿಕರು ಭಾರತೀಯ ಸೇನೆಯ ಸಿಬ್ಬಂದಿಯೊಂದಿಗೆ “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗುತ್ತಿರುವ ವೀಡಿಯೊ ವೈರಲ್ ಆಗಿದೆ.
2020 ರಲ್ಲಿ ಲಡಾಖ್ ಗಾಲ್ವಾನ್ ಕಣಿವೆಯಲ್ಲಿ ನಡೆದ ಘರ್ಷಣೆಯ ನಂತರ ಭಾರತ ಮತ್ತು ಚೀನಾ ನಡುವಿನ ದೀರ್ಘಕಾಲದ ವಿವಾದದ ಹಿನ್ನೆಲೆಯಲ್ಲಿ ಸಕಾರಾತ್ಮಕ ಭಾವನೆಗಳನ್ನು ವ್ಯಕ್ತಪಡಿಸಿದ ಹಲವಾರು ಸೋಶಿಯಲ್ ಮೀಡಿಯಾ ಬಳಕೆದಾರರು ಈ ವೀಡಿಯೊವನ್ನು ಹಂಚಿಕೊಂಡಿದ್ದಾರೆ.