
ಚಿಕ್ಕಬಳ್ಳಾಪುರ: ಖಾಸಗಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೆಂಕಿ ಹೊತ್ತಿಕೊಂಡ ಪರಿಣಾಮ ಇಬ್ಬರು ಸಜೀವದಹನಗೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ನಡೆದಿದೆ.
ಚಿಂತಾಮಣಿಯ ಗೋಪಲ್ಲಿ ಗೇಟ್ ಬಳಿ ಈ ಅಪಘಾತ ಸಂಭವಿಸಿದೆ. ಬಸ್ ಹಾಗೂ ಕಾರಿನ ನಡುವೆ ಡಿಕ್ಕಿ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಇಬ್ಬರು ಸಜೀವದಹನವಾಗಿದ್ದಾರೆ. ಉಳಿದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.