
ಚಿಕ್ಕಬಳ್ಳಾಪುರ: ವಿದ್ಯುತ್ ಕಂಬ, ಕಾಂಪೌಂಡ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಕಾಣಿಸಿಕೊಂಡು ಬಸ್ ಸುಟ್ಟು ಭಸ್ಮವಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿಯಲ್ಲಿ ಘಟನೆ ನಡೆದಿದೆ. ಬಸ್ ಗೆ ಬೆಂಕಿ ತಗುಲಿ ಪಕ್ಕದಲ್ಲಿದ್ದ ಹಳೆಯ ಬೈಕುಗಳು ಕೂಡ ಬೆಂಕಿಗಾಃಉತಿಯಾಗಿವೆ. ಪೊಲೀಸರು ಜಪ್ತಿ ಮಾಡಿದ ಬೈಕ್ ಗಳು ಇವಾಗಿದ್ದು, ಬೆಂಕಿ ಹತ್ತಿಕೊಂಡ ಜಾಗದ ಸಮೀಪವೇ ಪೆಟ್ರೋಲ್ ಬಂಕ್ ಕೂಡ ಇದೆ.
ಸ್ಥಳೀಯರು ಮತ್ತು ಅಗ್ನಿಶಾಮಕ ದಳ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ನಂದಿಸಿದ್ದಾರೆ. ಬಸ್ ಗೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಚಾಲಕ ಪರಾರಿಯಾಗಿದ್ದಾನೆ. ಶ್ರೀನಿವಾಸ ನಾಯ್ಡು ಎಂಬವರಿಗೆ ಸೇರಿದ ಖಾಸಗಿ ಬಸ್ ಇದಾಗಿದೆ. ಚಿಂತಾಮಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.