ಚಿಕ್ಕಬಳ್ಳಾಪುರ: ಜೀಪ್, ಕ್ಯಾಂಟರ್ ಡಿಕ್ಕಿಯಾಗಿ 6 ಮಂದಿ ಸಾವನ್ನಪ್ಪಿದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ಸಮೀಪ ನಡೆದಿದೆ.
ಚಿಂತಾಮಣಿ ತಾಲೂಕಿನ ಮಾದನಾಯಕನಹಳ್ಳಿ ಸಮೀಪ ಘಟನೆ ನಡೆದಿದೆ. ಅಪಘಾತದಲ್ಲಿ ಹಲವರು ಗಾಯಗೊಂಡಿದ್ದು, ಚಿಂತಾಮಣಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಮಾಲೂರು ಶಾಸಕ ಕೆವೈ ನಂಜೇಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ, ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲು ಶಾಸಕರು ನೆರವಾಗಿದ್ದಾರೆ.
ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ ಎನ್ನಲಾಗಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.