alex Certify ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ಆಚಾರ್ಯ’ ಚಿತ್ರ‌ ತಂಡ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಡುಗಡೆ ದಿನಾಂಕ ಘೋಷಣೆ ಮಾಡಿದ ‘ಆಚಾರ್ಯ’ ಚಿತ್ರ‌ ತಂಡ

ಮೆಗಾಸ್ಟಾರ್ ಚಿರಂಜೀವಿ ನಟನೆಯ ಕೊರಟಾಲ ಶಿವ ನಿರ್ದೇಶನದ ಬಹುನಿರೀಕ್ಷಿತ ‘ಆಚಾರ್ಯ’ ಸಿನಿಮಾವನ್ನು ಮುಂದಿನ ವರ್ಷ ಫೆಬ್ರವರಿ 4ರಂದು ಬಿಡುಗಡೆ ಮಾಡುವುದಾಗಿ ಚಿತ್ರತಂಡ ಘೋಷಣೆ ಮಾಡಿದೆ.

ಅಲ್ಲು ಅರ್ಜುನ್ ಅಭಿನಯದ ಪ್ಯಾನ್ ಇಂಡಿಯಾ ಚಿತ್ರ ‘ಪುಷ್ಪ’ ಡಿಸೆಂಬರ್ 17ರಂದು ರಿಲೀಸ್ ಮಾಡುತ್ತಿರುವ ಕಾರಣ ಚಿರಂಜೀವಿ ಅವರ ‘ಆಚಾರ್ಯ’ ಸಿನಿಮಾ ದಿನಾಂಕವನ್ನು ಮುಂದಕ್ಕೆ ಇಟ್ಟಿದ್ದಾರೆ.

ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರು ಅರೆಸ್ಟ್

ಈ ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ಪುತ್ರ ರಾಮ್ ಚರಣ್ ಕೂಡ ಅಭಿನಯಿಸಿದ್ದು, ಕಾಜಲ್ ಅಗರವಾಲ್, ಪೂಜಾ ಹೆಗ್ಡೆ, ಕೀರ್ತಿ ಸುರೇಶ್, ಸೋನು ಸೂದ್ ಸೇರಿದಂತೆ ಕನ್ನಡದ ಕಿಶೋರ್ ಹಾಗೂ ಭಜರಂಗಿ ಲೋಕಿ ಈ ಸಿನಿಮಾದಲ್ಲಿ ತೆರೆಹಂಚಿಕೊಂಡಿದ್ದಾರೆ. ನಿರಂಜನ್ ರೆಡ್ಡಿ ನಿರ್ಮಾಣದ ಈ ಚಿತ್ರಕ್ಕೆ ಮಣಿ ಶರ್ಮ ಸಂಗೀತ ಸಂಯೋಜನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...