
ಚಿತ್ರದುರ್ಗ: ಚಿತ್ರದುರ್ಗ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಕಾರ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ
ಚಿಕ್ಕಬೆನ್ನೂರು ಸಮೀಪ ನಡೆದ ಅಪಘಾತದಲ್ಲಿ ಕಾರ್ ನಲ್ಲಿದ್ದ ಮಗು, ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಭರಮಸಾಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.