alex Certify BREAKING NEWS: ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಚಿತ್ರದುರ್ಗದಲ್ಲಿ ಭೀಕರ ರಸ್ತೆ ಅಪಘಾತ : ನಾಲ್ವರು ಸ್ಥಳದಲ್ಲೇ ಸಾವು

ಚಿತ್ರದುರ್ಗ: ನಿಂತಿದ್ದ ಲಾರಿಗೆ ಹಿಂದಿನಿಂದ ಕಾರ್ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ್ದಾರೆ. ಚಿತ್ರದುರ್ಗ ತಾಲೂಕಿನ ಮಲ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಘಟನೆ ನಡೆದಿದೆ.

ಲಾರಿ ಹಿಂಬದಿಗೆ ಕಾರ್ ಡಿಕ್ಕಿ ಹೊಡೆದ ರಭಸಕ್ಕೆ ಕಾರ್ ನಲ್ಲಿದ್ದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಗುರುತು ಪತ್ತೆಯಾಗಿಲ್ಲ. ದಾವಣಗೆರೆ ಕಡೆಯಿಂದ ಬೆಂಗಳೂರು ಕಡೆಗೆ ಕಾರ್ ತೆರಳುತ್ತಿತ್ತು. ಅಪಘಾತದ ತೀವ್ರತೆಗೆ ಕಾರ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...