
ಚಿತ್ರದುರ್ಗ: ಚಿತ್ರದುರ್ಗ ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ರಿಟ್ ಅರ್ಜಿ ಸಲ್ಲಿಸಲಾಗಿದೆ. ಚಿತ್ರದುರ್ಗದ ಡಿ.ಎಸ್. ಮಲ್ಲಿಕಾರ್ಜುನ ಮತ್ತಿತರರು ರಿಟ್ ಸಲ್ಲಿಸಿದ್ದಾರೆ.
ನಿವೃತ್ತ ಐಎಎಸ್ ಅಧಿಕಾರಿ ಪಿ.ಎಸ್. ವಸ್ತ್ರದ ನೇಮಕ ರದ್ದು ಮಾಡುವಂತೆ ಮನವಿ ಮಾಡಲಾಗಿದೆ. ಈಗಾಗಲೇ ಡಾ. ಶಿವಮೂರ್ತಿ ಮುರುಘಾ ಶರಣರು ಜಿಪಿಎ ನೀಡಿದ್ದಾರೆ. ಶಿಕ್ಷಣ ಸಂಸ್ಥೆಗಳಿಗೆ ನಿವೃತ್ತ ನ್ಯಾಯಾಧೀಶರಿಗೆ ಜಿಪಿಎ ನೀಡಿದ್ದಾರೆ. ಮಠದ ವ್ಯವಹಾರಗಳಿಗೆ ಬಸವಪ್ರಭು ಸ್ವಾಮೀಜಿಯವರಿಗೆ ಜೆಪಿಎ ನೀಡಲಾಗಿದೆ.
ಮಠಾಧಿಪತಿ ಜೈಲಿನಲ್ಲಿರುವುದು ಆಡಳಿತಾಧಿಕಾರಿ ನೇಮಿಸಲು ಸಕಾರಣವಲ್ಲ. ಹೀಗಾಗಿ ಆಡಳಿತಾಧಿಕಾರಿ ನೇಮಕ ರದ್ದುಪಡಿಸಬೇಕೆಂದು ಕೋರಿ ರಿಟ್ ಸಲ್ಲಿಸಲಾಗಿದೆ.