![](https://kannadadunia.com/wp-content/uploads/2021/04/bpl-card-1280x720-1.jpg)
ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 18 ಸಾವಿರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಾಗಿದೆ. ಇದರಿಂದಾಗಿ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸುಮಾರು 15 ಸಾವಿರದಷ್ಟು ರೈತರ ಬಿಪಿಎಲ್ ಕಾರ್ಡುಗಳನ್ನು ರದ್ದು ಮಾಡಲಾಗಿದೆ. ಸರ್ಕಾರ ಬಿಪಿಎಲ್ ಕಾರ್ಡ್ ಪಡೆಯಲು ನಿಗದಿಪಡಿಸಿದ ಮಾನದಂಡಗಳು ಇಲ್ಲದ ಕಾರಣ ಬಡವರ ಬಿಪಿಎಲ್ ಕಾರ್ಡ್ ಕೂಡ ರದ್ದಾಗಿದೆ. ಇದರಿಂದಾಗಿ ರೈತರು, ಬಡವರು ತೊಂದರೆ ಅನುಭವಿಸುವಂತಾಗಿದೆ.
ಶ್ರೀಮಂತರ ಬಿಪಿಎಲ್ ಕಾರ್ಡ್ ಗಳನ್ನು ರದ್ದು ಮಾಡಲಿ. ಆದರೆ, ರೈತರು, ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡಿರುವುದರಿಂದ ಮೊದಲೇ ಸಂಕಷ್ಟದಲ್ಲಿರುವ ಜನರಿಗೆ ತೊಂದರೆಯಾಗಿದೆ. ರೈತಾಪಿ ವರ್ಗದವರು ಸೇರಿದಂತೆ ಬಡವರ ಬಿಪಿಎಲ್ ಕಾರ್ಡ್ ರದ್ದು, ಮಾಡದೇ ಯಥಾಸ್ಥಿತಿ ಮುಂದುವರೆಸಬೇಕೆಂದು ಹೇಳಲಾಗಿದೆ.