alex Certify BREAKING: ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ: ಅಪಘಾತದಲ್ಲಿ 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ: ಅಪಘಾತದಲ್ಲಿ 20ಕ್ಕೂ ಅಧಿಕ ಪ್ರಯಾಣಿಕರಿಗೆ ಗಾಯ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಚಿಕ್ಕಹಳ್ಳಿ ಗ್ರಾಮದ ಬಳಿ ರಾಜಹಂಸ ಬಸ್ ಅಪಘಾತಕ್ಕೀಡಾಗಿದ್ದು, 20ಕ್ಕೂ ಅಧಿಕ ಪ್ರಯಾಣಿಕರು ಗಾಯಗೊಂಡಿದ್ದಾರೆ.

ಇಟ್ಟಿಗೆ ತುಂಬಿದ್ದ ಟ್ರ್ಯಾಕ್ಟರ್ ಗೆ ಸರ್ಕಾರಿ ಬಸ್ ಡಿಕ್ಕಿ ಆಗಿದೆ. ಚಿಕ್ಕಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ಅಪಘಾತ ಸಂಭವಿಸಿದೆ. ಮದುವೆ ಮುಗಿಸಿಕೊಂಡು ಮಾಗಡಿಗೆ ಹಿಂದಿರುಗುವಾಗ ಅಪಘಾತ ಸಂಭವಿಸಿದ್ದು, ಗಾಯಾಳುಗಳನ್ನು ಚಳ್ಳಕೆರೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...