ಚಿತ್ರದುರ್ಗ: ಚಿತ್ರದುರ್ಗದ ಕಡ್ಲೆಗುದ್ದು ಗ್ರಾಮದ ಜನರ ನಿದ್ದೆಗೆಡಿಸಿದ್ದ ಚಿರತೆಯನ್ನು ಕೊನೆಗೂ ಅರಣ್ಯ ಇಲಾಖೆ ಸಿಬ್ಬಂದಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.
ಕಡ್ಲೆಗುದ್ದು, ಸಿದ್ದಾಪುರ, ಕುರುಬರಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಕಳೆದ ಒಂದು ತಿಂಗಳಿಂದ ಚಿರತೆ ಹಾವಳಿ ಆತಂಕ ಸೃಷ್ಟಿಸಿತ್ತು. ಹಲವು ಬಾರಿ ಜಾನುವಾರುಗಳ ಮೇಲೆ ದಾಳಿ ನಡೆಸಿತ್ತು. ಇದರಿಂದ ಸಂಜೆಯಾದರೆ ಗ್ರಾಮಸ್ಥರು ಮನೆಯಿಂದ ಹೊರಬರಲು ಭಯಪಡುತ್ತಿದ್ದರು.
ಇದೀಗ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆಗೆ ಚಿರತೆ ಬೋನಿಗೆ ಬಿದ್ದಿದೆ. ಚಿರತೆಯನ್ನು ಆಡುಮಲ್ಲೇಶ್ವರ ಕಿರು ಮೃಗಾಲಯಕ್ಕೆ ಶಿಫ್ಟ್ ಮಾಡಲಾಗಿದೆ.