alex Certify ಬಾಯ್ತಪ್ಪಿನಿಂದ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಏಕವಚನದಲ್ಲಿ ಸಂಭೋದಿಸಿದ ಸಿದ್ಧರಾಮಯ್ಯ ವಿಷಾದ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಾಯ್ತಪ್ಪಿನಿಂದ ರಾಷ್ಟ್ರಪತಿ ದ್ರೌಪದಿ ಮುರ್ಮುರನ್ನು ಏಕವಚನದಲ್ಲಿ ಸಂಭೋದಿಸಿದ ಸಿದ್ಧರಾಮಯ್ಯ ವಿಷಾದ

ಬೆಂಗಳೂರು: ಚಿತ್ರದುರ್ಗದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕವಚನದಲ್ಲಿ ಸಂಬೋಧಿಸಿದ್ದು, ಈ ಬಗ್ಗೆ ವಿಷಾದ ವ್ಯಕ್ತಪಡಿಸಿದ್ದಾರೆ.

ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ರಾಷ್ಟ್ರಪತಿಗಳಾಗಿರುವ ದ್ರೌಪದಿ ಮುರ್ಮು ಅವರಿಗೆ ಸಂಸತ್ ಭವನ ಉದ್ಘಾಟನೆಗೆ ಆಹ್ವಾನ ನೀಡದೆ ಬಿಜೆಪಿ ನಾಯಕರು ಅವಮಾನಿಸಿರುವುದು ನನಗೆ ತೀವ್ರ ನೋವು ಉಂಟುಮಾಡಿದ್ದು ಮಾತ್ರವಲ್ಲ ನನ್ನಲ್ಲಿ ಆಕ್ರೋಶ ಹುಟ್ಟಿಸಿತ್ತು. ಶೋಷಿತರ ಜಾಗೃತಿ ಸಮಾವೇಶದಲ್ಲಿ ಸ್ವಲ್ಪ ಭಾವುಕನಾಗಿ ಈ ಆಕ್ರೋಶವನ್ನು ಹೊರಹಾಕುವ ಭರದಲ್ಲಿ ಬಾಯ್ತಪ್ಪಿನಿಂದ ರಾಷ್ಟ್ರಪತಿಗಳನ್ನು ಏಕವಚನದಲ್ಲಿ‌ ಸಂಭೋದಿಸಿದೆ ಎಂದು ತಿಳಿಸಿದ್ದಾರೆ.

ಗ್ರಾಮೀಣ ಪ್ರದೇಶದಿಂದ ಬಂದ ನನ್ನಂತಹವರು ಅಪ್ಪ-ಅಮ್ಮ ಸೇರಿದಂತೆ ಹಿರಿಯರನ್ನು ಕೂಡಾ ಏಕವಚನದಲ್ಲಿ ಸಂಭೋದಿಸುವುದು ರೂಢಿ. ಗೌರವಾನ್ವಿತ ರಾಷ್ಟ್ರಪತಿಗಳು ನನ್ನಂತೆಯೇ ಶೋಷಿತ ಸಮಾಜದಿಂದ ಬಂದವರು, ಅವರ ಬಗ್ಗೆ ಅಪಾರ ಗೌರವವಿದೆ. ಅವರನ್ನು ಏಕವಚನದಲ್ಲಿ‌ ಸಂಬೋಧಿಸಬಾರದಿತ್ತು. ಅಚಾತುರ್ಯದಿಂದ ಆಗಿರುವ ಈ ಪ್ರಮಾದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸಿಎಂ ತಿಳಿಸಿದ್ದಾರೆ.

ಬಿಜೆಪಿ ನಡೆ ಟೀಕಿಸುವ ಭರದಲ್ಲಿ ದ್ರೌಪದಿ ಮುರ್ಮು ಅವರನ್ನು ಸಿಎಂ ಏಕವಚನದಲ್ಲಿ ಕರೆದಿದ್ದಾರೆ. ಇವರ ಯೋಗ್ಯತೆಗೆ ಪಾಪ ದ್ರೌಪದಿ ಮುರ್ಮು ಶೋಷಿತ ವರ್ಗಕ್ಕೆ ಸೇರಿದ ಕಾರಣಕ್ಕೆ ನೂತನ ಸಂಸತ್ ಭವನ, ಅಯೋಧ್ಯೆ ಶ್ರೀರಾಮ ಮಂದಿರ ಉದ್ಘಾಟನೆಗೆ ಕರೆದಿಲ್ಲ ಎಂದು ಹೇಳಿದ್ದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...