alex Certify ಚಿತ್ರದುರ್ಗದಲ್ಲಿ ಇಂದು ಕಾಂಗ್ರೆಸ್ ಐಕ್ಯತಾ ಸಮಾವೇಶ: 5 ಲಕ್ಷಕ್ಕೂ ಅಧಿಕ ಮಂದಿ ಭಾಗಿ ಸಾಧ್ಯತೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಿತ್ರದುರ್ಗದಲ್ಲಿ ಇಂದು ಕಾಂಗ್ರೆಸ್ ಐಕ್ಯತಾ ಸಮಾವೇಶ: 5 ಲಕ್ಷಕ್ಕೂ ಅಧಿಕ ಮಂದಿ ಭಾಗಿ ಸಾಧ್ಯತೆ

ಚಿತ್ರದುರ್ಗ: ವಿಧಾನಸಭೆ ಚುನಾವಣೆಗೆ ರಣಕಹಳೆ ಮೊಳಗಿಸಿರುವ ಕಾಂಗ್ರೆಸ್ ಚಿತ್ರದುರ್ಗದಲ್ಲಿ ಇಂದು ಬೃಹತ್ ಐಕ್ಯತಾ ಸಮಾವೇಶ ಹಮ್ಮಿಕೊಂಡಿದೆ. ಎಸ್ಸಿ -ಎಸ್ಟಿ ಶಕ್ತಿ ಪ್ರದರ್ಶನ ಹಮ್ಮಿಕೊಂಡಿದ್ದು, 5 ಲಕ್ಷಕ್ಕೂ ಅಧಿಕ ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ.

ಚಿತ್ರದುರ್ಗದ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ಸಮಾವೇಶಕ್ಕಾಗಿ ವಿಶಾಲ ವೇದಿಕೆ ನಿರ್ಮಿಸಲಾಗಿದ್ದು, ನೂರಕ್ಕೂ ಅಧಿಕ ನಾಯಕರು ವೇದಿಕೆಯಲ್ಲಿ ಕೂರಲು ಆಸನಗಳ ವ್ಯವಸ್ಥೆ ಮಾಡಲಾಗಿದೆ. 1,000ಕ್ಕೂ ಅಧಿಕ ವಿಐಪಿ ಸೋಪಾ ಹಾಕಿದ್ದು ಒಂದು ಲಕ್ಷಕ್ಕೂ ಅಧಿಕ ಆಸನಗಳ ವ್ಯವಸ್ಥೆ ಮಾಡಲಾಗಿದೆ.

ದಲಿತ ಸಮುದಾಯಗಳ ಮೇಲೆ ಕಾಂಗ್ರೆಸ್ ಕಣ್ಣಿಟ್ಟಿದ್ದು, ಮಧ್ಯ ಕರ್ನಾಟಕ ಭಾಗದಲ್ಲಿ ದಲಿತ ಸಮುದಾಯ ಹೆಚ್ಚಾಗಿರುವುದರಿಂದ ಚಿತ್ರದುರ್ಗದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಬೃಃತ್ ಐಕ್ಯತಾ ಸಮಾವೇಶ ಆಯೋಜಿಸಲಾಗಿದೆ.

ಸುತ್ತಮುತ್ತಲಿನ ಜಿಲ್ಲೆಗಳಿಂದ ಒಂದು ಸಾವಿರಕ್ಕೂ ಅಧಿಕ ಬಸ್ ಗಳ ವ್ಯವಸ್ಥೆ ಮಾಡಲಾಗಿದ್ದು, 5 ಲಕ್ಷಕ್ಕೂ ಅಧಿಕ ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್, ರಣದೀಪ್ ಸುರ್ಜೇವಾಲಾ, ಡಾ.ಜಿ. ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...