ಚಿತ್ರದುರ್ಗ: ಭದ್ರಾ ಮೇಲ್ದಂಡೆ ಯೋಜನೆ ಶೀಘ್ರ ಅನುಷ್ಠಾನಕ್ಕೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲಾ ನೀರಾವರಿ ಅನುಷ್ಠಾನ ಹೋರಾಟ ಸಮಿತಿ ಜನವರಿ 23 ರಂದು ಚಿತ್ರದುರ್ಗ ಬಂದ್ ಗೆ ಕರೆ ನೀಡಿದೆ.
ಹೋರಾಟ ಸಮಿತಿಯ ಅಧ್ಯಕ್ಷ ಬಿ.ಎ. ಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನ ಕೈಗೊಳ್ಳಲಾಗಿದೆ. 20ಕ್ಕೂ ಹೆಚ್ಚು ಸಂಘಟನೆಗಳ ಪ್ರಮುಖರು ಸಭೆಯಲ್ಲಿ ಭಾಗವಹಿಸಿದ್ದರು.
ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಿ 5300 ಕೋಟಿ ರೂ. ನೆರವು ನೀಡುವುದಾಗಿ ಕಳೆದ ವರ್ಷ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಹೇಳಿದ್ದರು. ಆದರೆ, ಅನುದಾನವೇ ಬಿಡುಗಡೆ ಆಗಿಲ್ಲ ಎಂದು ಲಿಂಗಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಭದ್ರಾ ಮೇಲ್ದಂಡೆ ಯೋಜನೆಯ ಶೀಘ್ರ ಕಾರ್ಯಾನುಷ್ಠಾನಕ್ಕೆ ಆಗ್ರಹಿಸಿ ಜನವರಿ 23 ರಂದು ಚಿತ್ರದುರ್ಗ ಬಂದ್ ಗೆ ಕರೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.