
ಚಿತ್ರದುರ್ಗ: ಪೊಲೀಸರು ಎಂದು ಹೇಳಿ ಮನೆಗೆ ನುಗ್ಗಿ ಚಿನ್ನಾಭರಣ ದರೋಡೆ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆಯ ವಾಸವಿ ಕಾಲೋನಿಯಲ್ಲಿ ಘಟನೆ ನಡೆದಿದೆ.
ಉದ್ಯಮಿ ಲತಾ ಎಂಬುವರ ಮನೆಗೆ ನುಗ್ಗಿ ದುಷ್ಕರ್ಮಿಗಳು ಚಿನ್ನದ ರೋಡೆ ಮಾಡಿದ್ದಾರೆ. ಮನೆಯಲ್ಲಿದ್ದ 300 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಬಂಧಿಸುವುದಾಗಿ ಬೆದರಿಕೆ ಹಾಕಿ ಚಿನ್ನ ದೋಚಿ ಪರಾರಿಯಾಗಿದ್ದಾರೆ. ಕಾರ್ ನಲ್ಲಿ ಬಂದಿದ್ದ ನಾಲ್ವರು ದರೋಡೆಕೋರರು ಕೃತ್ಯವೆಸಗಿದ್ದಾರೆ. ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ರಾಜಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಳ್ಳಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.