alex Certify SHOCKING NEWS: ಮತ್ತೊಂದು ಘೋರ ಘಟನೆ; ಕುಡುಕ ಮಗನಿಂದಲೇ ತಂದೆಯ ಬರ್ಬರ ಹತ್ಯೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: ಮತ್ತೊಂದು ಘೋರ ಘಟನೆ; ಕುಡುಕ ಮಗನಿಂದಲೇ ತಂದೆಯ ಬರ್ಬರ ಹತ್ಯೆ

ಚಿತ್ರದುರ್ಗ: ರಾಯಚೂರಿನ ಲಿಂಗಸಗೂರು ತಾಲೂಕಿನಲ್ಲಿ ಕುಡುಕ ತಂದೆ, ತಾಯಿಗೆ ಕೊಡುತ್ತಿದ್ದ ಕಿರುಕುಳಕ್ಕೆ ಬೇಸತ್ತು ಮಗನೊಬ್ಬ ತಂದೆಯನ್ನೇ ಹತ್ಯೆಗೈದ ಘಟನೆ ನಡೆದಿರುವಾಗಲೇ ಚಿತ್ರದುರ್ಗದಲ್ಲಿ ಕುಡಕ ಮಗನೊಬ್ಬ ಅಪ್ಪನನ್ನೇ ಕೊಂದು ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ವರವು ಕಾವಲು ಗ್ರಾಮದ ಬಳಿ ಈ ಘಟನೆ ನಡೆದಿದೆ. ಕಂಠಪೂರ್ತಿ ಕುಡಿದು ಬಂದ ಮಗ ತಂದೆಯ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೈದಿದ್ದಾನೆ ಎಂದು ತಿಳಿದುಬಂದಿದೆ.

ಸೂರಯ್ಯ (55) ಮಗನಿಂದಲೇ ಕೊಲೆಯಾದ ದುರ್ದೈವಿ. ಆರೋಪಿ ಪುತ್ರ ಮೋಹನ್ ಕುಡಿದ ಅಮಲಿನಲ್ಲಿ ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ. ಸ್ಥಳಕ್ಕಾಗಮಿಸಿದ ಪೊಲೀಸರು ಆರೋಪಿ ಮಗನನ್ನು ವಶಕ್ಕೆ ಪಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...