ಬೆಂಗಳೂರು : ಬೆಂಗಳೂರಿನಲ್ಲಿ ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪತ್ತೆಯಾಗಿರುವ ಘಟನೆಗೆ ಸಂಬಂಧಿಸಿದಂತೆ ಹಾಸ್ಟೆಲ್ ವಿರುದ್ಧ ಸುಮೋಟೋ ಕೇಸ್ ದಾಖಲಾಗಿದೆ.
ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆ 49 ವಿದ್ಯಾರ್ಥಿನಿಯರು ಅತಿಸಾರ ಬೇಧಿಯಿಂದ ತೀವ್ರ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು . ತೀವ್ರ ಬೇಧಿ, ವಾಂತಿ ಮತ್ತು ನಿರ್ಜಲೀಕರಣ ಸಮಸ್ಯೆಯಿಂದ 49 ವಿದ್ಯಾರ್ಥಿನಿಯರು ಆಸ್ಪತ್ರೆಗೆ ದಾಖಲಾಗಿದ್ದು, ಇವರಲ್ಲಿ 28 ಮಂದಿ ಟ್ರಾಮಾ ಕೇರ್ ಸೆಂಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಪೈಕಿ ಇಬ್ಬರಿಗೆ ಕಾಲರಾ ಪತ್ತೆಯಾಗಿದ್ದು, ಸುಮೋಟೋ ಕೇಸ್ ದಾಖಲಿಸಲಾಗಿದೆ.
ಹಾಸ್ಟೆಲ್ ಗೆ ಮಹಿಳಾ ಆಯೋಗದ ಅಧ್ಯಕ್ಷೇ ನಾಗಲಕ್ಷ್ಮೀ ಚೌಧರಿ ಭೇಟಿ ನೀಡಿ, ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು. ನಂತರ ಮಾತನಾಡಿದ ಅವರು ಈ ಬಗ್ಗೆ ನಾನು ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ. ಪ್ರತಿಯೊಂದು ಆಸ್ಪತ್ರೆ ಹಾಗೂ ವಸತಿ ನಿಲಯಕ್ಕೆ ಭೇಟಿ ನೀಡುತ್ತೇನೆ. ಅಲ್ಲಿನ ಸಮಸ್ಯೆ ಬಗ್ಗೆ ತಿಳಿಯುತ್ತೇನೆ. ಈಗ ಸುಮೋಟೋ ಪ್ರಕರಣ ದಾಖಲಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಒಂದೆಡೆ ಬರಗಾಲ, ಇನ್ನೊಂದೆಡೆ ಕುಡಿಯುವ ನೀರಿಗೂ ತತ್ವಾರ ಶುರುವಾಗಿದೆ. ಈ ನಡುವೆ ರಾಜ್ಯದಲ್ಲಿ ಅತ್ಯಧಿಕ ತಾಪಮಾನ ದಾಖಲಾಗುತ್ತಿದ್ದು, ಬಿಸಿಲ ಝಳದಿಂದ ಜನರು ಹೈರಾಣಾಗುತ್ತಿದ್ದಾರೆ.