ನವದೆಹಲಿ : ಹೆಲಿಕಾಪ್ಟರ್ ದುರಂತದಲ್ಲಿ ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಸೇರಿದಂತೆ 13 ಜನ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಸಂಪುಟ ಸಚಿವರೊಂದಿಗೆ ಸಭೆ ನಡೆಸಿದ್ದಾರೆ.
ತಮಿಳುನಾಡಿನಲ್ಲಿ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನಾ ಮುಖ್ಯಸ್ಥ ಸಿಡಿಎಸ್ ಬಿಪಿನ್ ರಾವತ್ ಅಸುನೀಗಿದ್ದಾರೆ. ಹೀಗಾಗಿ ಪ್ರಧಾನಿ ಮೋದಿ ಅವರಿಂದ ಹಿಡಿದು ದೇಶದ ಜನತೆ ಸಂತಾಪ ಸಲ್ಲಿಸಿದ್ದು, ಜೊತೆಗೆ ಪ್ರಧಾನಿ ಮೋದಿ ಸಭೆ ನಡೆಸಿದ್ದಾರೆ. ಪ್ರಧಾನಿ ನಿವಾಸದಲ್ಲಿ ಸಭೆ ಆರಂಭವಾಗಿದೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಘಟನೆ ಕುರಿತು ಮಾಹಿತಿ ನೀಡಿದ್ದಾರೆ.
ಬಿಪಿನ್ ರಾವತ್ ಅವರ ಸಾವಿಗೆ ಕಂಬನಿ ಮಿಡಿದಿರುವ ಪ್ರಧಾನಿ ಮೋದಿ, ಬಿಪಿನ್ ರಾವತ್ ಅತ್ಯುತ್ತಮ ಯೋಧ. ಸೇನಾ ಪಡೆಯನ್ನು ಆಧುನೀಕರಣಗೊಳಿಸಲು ಅವರ ಕೊಡುಗೆ ಹೆಚ್ಚಿದೆ ಎಂದು ಟ್ವೀಟ್ ಮಾಡಿದ್ದಾರೆ.
ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಹಲವು ನಾಯಕರು ಭಾಗವಹಿಸಿದ್ದಾರೆ.