
ಇದರ ಮಧ್ಯೆ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರ ಆಪ್ತ ಸಂಜಯ್ ರಾವತ್ ಇನ್ನೆಷ್ಟು ದಿನ ಗುವಾಹಟಿಯಲ್ಲಿ ಅಡಗಿ ಕುಳಿತುಕೊಳ್ಳುವಿರಿ ಎಂದು ಪ್ರಶ್ನಿಸಿದ್ದಾರೆ. ಜೊತೆಗೆ ಉದ್ಧವ್ ಠಾಕ್ರೆ ಪುತ್ರ ಆದಿತ್ಯ ಠಾಕ್ರೆ, ಪ್ರತಿಯೊಬ್ಬ ಶಾಸಕರುಗಳಿಗೆ ದಿನವೊಂದಕ್ಕೆ 9 ಲಕ್ಷ ರೂಪಾಯಿಗಳನ್ನು ಖರ್ಚು ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿಯಿಂದಾಗಿ ನೂರಾರು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಜೊತೆಗೆ ಲಕ್ಷಾಂತರ ಮಂದಿ ನಿರ್ವಸತಿಗರಾಗಿದ್ದು, ಇವರುಗಳ ಯೋಗಕ್ಷೇಮ ನೋಡಿಕೊಳ್ಳಬೇಕಾದ ಅಸ್ಸಾಂ ಸರ್ಕಾರ, ಮಹಾರಾಷ್ಟ್ರ ಸರ್ಕಾರವನ್ನು ಉರುಳಿಸಲು ಕೋಟ್ಯಾಂತರ ರೂಪಾಯಿ ಖರ್ಚು ಮಾಡುತ್ತಿದೆ ಎಂದು ಆದಿತ್ಯ ಠಾಕ್ರೆ ಹೇಳಿದ್ದಾರೆ.