
ಚಂದ್ರಶೇಖರ್ ಬಂಡಿಯಪ್ಪ ಕಥೆ ಬರೆದು ನಿರ್ದೇಶಿಸಿರುವ ಈ ಚಿತ್ರವನ್ನು ವಿದ್ಯಾಶೇಖರ್ ಎಂಟರ್‌ಟೈನ್ಮೆಂಟ್ ಬ್ಯಾನರ್ ನಲ್ಲಿ ಡಾಕ್ಟರ್ ಕಲ್ಲಹಳ್ಳಿ ಚಂದ್ರಶೇಖರ ನಿರ್ಮಾಣ ಮಾಡಿದ್ದು, ಸಚಿನ್ ಬಸ್ರೂರು ಸಂಗೀತ ಸಂಯೋಜನೆ ನೀಡಿದ್ದಾರೆ. ಪೃಥ್ವಿರಾಜ್ ಸಹ ನಿರ್ದೇಶಕರಾಗಿದ್ದು, ಸಿದ್ದು ಕಂಚನಹಳ್ಳಿ ಛಾಯಾಗ್ರಹಣವಿದೆ. ಪೃಥ್ವಿ ಅಂಬಾರ್, ಧನ್ಯ ರಾಮ್ ಕುಮಾರ್ ಹಾಗೂ ಸಾಯಿ ಕುಮಾರ್ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ.
