alex Certify ಕ್ರಿಸ್ ಮಸ್ ರಜೆಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ 1 ಸಾವಿರ ಹೆಚ್ಚುವರಿ ಬಸ್, ಶೇ. 10 ರಷ್ಟು ರಿಯಾಯಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ರಿಸ್ ಮಸ್ ರಜೆಗೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್: KSRTCಯಿಂದ 1 ಸಾವಿರ ಹೆಚ್ಚುವರಿ ಬಸ್, ಶೇ. 10 ರಷ್ಟು ರಿಯಾಯಿತಿ

ಬೆಂಗಳೂರು: ಕ್ರಿಸ್ ಮಸ್ ಹಬ್ಬಕ್ಕೆ ಊರಿಗೆ ಹೊರಟವರಿಗೆ ಸಿಹಿ ಸುದ್ದಿ ಇಲ್ಲಿದೆ. ಕೆ.ಎಸ್.ಆರ್.ಟಿ.ಸಿ. ವತಿಯಿಂದ ಕ್ರಿಸ್ ಮಸ್ ಪ್ರಯುಕ್ತ ಒಂದು ಸಾವಿರ ಹೆಚ್ಚುವರಿ ಬಸ್ ಕಾರ್ಯಾಚರಣೆ ನಡೆಸಲಾಗುವುದು.

ಡಿಸೆಂಬರ್ 22 ರಿಂದ 24ರ ವರೆಗೆ ಬೆಂಗಳೂರಿನಿಂದ ಹೆಚ್ಚುವರಿ ಬಸ್ ಗಳು ಕಾರ್ಯಾಚರಣೆ ನಡೆಸಲಿವೆ.

ಕೆಎಸ್ಆರ್ಟಿಸಿಯಿಂದ 1000 ಹೆಚ್ಚುವರಿ ಬಸ್ ಗಳನ್ನು ಕಾರ್ಯಾಚರಣೆಗೆ ಇಳಿಸಲಾಗುವುದು.

ಬೆಂಗಳೂರಿನಿಂದ ರಾಜ್ಯದ ವಿವಿಧೆಡೆ ಹಾಗೂ ಅಂತರ ರಾಜ್ಯಕ್ಕೆ ಹೆಚ್ಚುವರಿ ಬಸ್ ವ್ಯವಸ್ಥೆ ಇರಲಿದೆ.

ಅದೇ ರೀತಿ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ ವಿಶೇಷ ಬಸ್ ಗಳು ವ್ಯವಸ್ಥೆ ಇರಲಿದೆ.

4 ಹಾಗೂ 4ಕ್ಕಿಂತ ಹೆಚ್ಚು ಟಿಕೆಟ್ ಕಾಯ್ದಿರಿಸಿದರೆ ಶೇಕಡ 5ರಷ್ಟು ರಿಯಾಯಿತಿ ನೀಡಲಾಗುತ್ತದೆ.

ಹೋಗುವ ಮತ್ತು ಬರುವ ಟಿಕೆಟ್ ಕಾಯ್ದಿರಿಸಿದರೆ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...