
545 ಪಿಎಸ್ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ತಂಡ ಮತ್ತೊಬ್ಬ ಆರೋಪಿಯನ್ನು ಬಂಧಿಸಿದೆ.
ಸಹಾಯಕ ಪ್ರಾಧ್ಯಾಪಕ ವಿಜಯಕುಮಾರ್ ಹೆಬ್ಬಾಳ್ಕರ್ ಅವರನ್ನು ಬಂಧಿಸಲಾಗಿದೆ. ಕಲಬುರ್ಗಿಯ ಸರ್ಕಾರಿ ಪದವಿ ಕಾಲೇಜಿನ ಅರ್ಥಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ವಿಜಯ ಕುಮಾರ್ ಹೆಬ್ಬಾಳ್ಕರ್ ಬಂಧಿತರಾಗಿದ್ದಾರೆ.
ಅಕ್ರಮವಾಗಿ ಪರೀಕ್ಷಾ ಕೊಠಡಿಗೆ ಹೋಗಿ ಬ್ಲೂಟೂತ್ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಹಗರಣದ ಕಿಂಗ್ ಪಿನ್ ರುದ್ರಗೌಡ ಪಾಟೀಲ ಸೂಚನೆ ಮೇರೆಗೆ ವಿಜಯ್ ಕುಮಾರ್ ಬ್ಲೂಟೂತ್ ಇಟ್ಟಿದ್ದರು. ಅಭ್ಯರ್ಥಿಗಳಿಗೆ ಸಹಾಯ ಮಾಡಿದ ಆರೋಪದಡಿ ಅವರನ್ನು ಬಂಧಿಸಲಾಗಿದೆ.