ಬೆಂಗಳೂರು: ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ಮೃತದೇಹ ಪತ್ತೆಯಾಗಿದೆ. ಸಿಐಡಿ ಡಿಎಸ್ಪಿ ಲಕ್ಷ್ಮಿ(33) ಮೃತಪಟ್ಟವರು ಎಂದು ಹೇಳಲಾಗಿದೆ.
ಅನ್ನಪೂರ್ಣೇಶ್ವರಿ ನಗರದ ಗೆಳೆಯನ ಮನೆಯಲ್ಲಿ ಅವರ ಮೃತದೇಹ ಕಂಡುಬಂದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.