ದಾವಣಗೆರೆ: ದಾವಣಗೆರೆ ಜಿಲ್ಲೆ ಚನ್ನಗಿರಿ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್, ಠಾಣೆಯ ಬಳಿ ದಾಂದಲೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ.
ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಈ ಬಗ್ಗೆ ಮಾಹಿತಿ ನೀಡಿದ್ದು, ಸಿಐಡಿ ಅಧಿಕಾರಿಗಳು ಪ್ರಕರಣದ ತನಿಖೆ ಆರಂಭಿಸಲಿದ್ದಾರೆ ಎಂದು ಹೇಳಿದ್ದಾರೆ.
ಮಟ್ಕಾ ಜೂಜಾಟ ನಡೆಸುತ್ತಿದ್ದ ಆರೋಪದ ಮೇಲೆ ಆದಿಲ್ ಎಂಬ ವ್ಯಕ್ತಿಯನ್ನು ಪೊಲೀಸರು ಠಾಣೆಗೆ ಕರೆದುಕೊಂಡು ಸಂದರ್ಭದಲ್ಲಿ ಕುಸಿದು ಬಿದ್ದು ಮೃತಪಟ್ಟಿದ್ದರು. ಇದು ಲಾಕಪ್ ಡೆತ್ ಎಂದು ಆರೋಪಿಸಿದ ಮೃತರ ಸಂಬಂಧಿಕರು ಮತ್ತು ಇತರರು ಪೊಲೀಸ್ ಠಾಣೆ ಮೇಲೆ ದಾಳಿ ನಡೆಸಿ ಕಲ್ಲು ತೂರಾಟ ನಡೆಸಿದ್ದರು. ಪೊಲೀಸ್ ವಾಹನಗಳನ್ನು ಹಾನಿಗೊಳಿಸಿದ್ದರು. ಘಟನೆಯಲ್ಲಿ ಅನೇಕ ಪೊಲೀಸರು ಕೂಡ ಗಾಯಗೊಂಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತಕ್ಕೂ ಅಧಿಕ ಮಂದಿಯನ್ನು ಬಂಧಿಸಲಾಗಿದೆ. ತನಿಖೆಯನ್ನು ಸಿಐಡಿಗೆ ವಹಿಸಲಾಗಿದೆ ಎಂದು ಹೇಳಲಾಗಿದೆ.