alex Certify ರೇಣುಕಾಚಾರ್ಯನ ತಮ್ಮನ ಮಗ ಚಂದ್ರು ಸಾವಿನ ತನಿಖೆ ಸಿಐಡಿಗೆ…? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ರೇಣುಕಾಚಾರ್ಯನ ತಮ್ಮನ ಮಗ ಚಂದ್ರು ಸಾವಿನ ತನಿಖೆ ಸಿಐಡಿಗೆ…?

ದಾವಣಗೆರೆ: ದಾವಣಗೆರೆ ಜಿಲ್ಲೆ ಹೊನ್ನಾಳಿ ಬಿಜೆಪಿ ಶಾಸಕ ರೇಣುಕಾಚಾರ್ಯ ಸೋದರನ ಮಗ ಚಂದ್ರಶೇಖರ್ ಸಾವಿನ ತನಿಖೆಯನ್ನು ಸಿಐಡಿಗೆ ವಹಿಸುವ ಸಾಧ್ಯತೆ ಇದೆ.

ಹೊನ್ನಾಳಿಯ ಶಾಸಕ ರೇಣುಕಾಚಾರ್ಯ ನಿವಾಸಕ್ಕೆ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿಗಳು ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.

ಪೊಲೀಸ್ ತನಿಖೆಯ ಬಗ್ಗೆ ರೇಣುಕಾಚಾರ್ಯ ಕುಟುಂಬ ಅಸಮಾಧಾನ ಹೊಂದಿದ್ದು, ಹೀಗಾಗಿ ತನಿಕೆಯನ್ನು ಸಿಐಡಿಗೆ ವಹಿಸುವ ಬಗ್ಗೆ ಗಂಭೀರ ಚರ್ಚೆ ನಡೆದಿದೆ. ಇಂದು ರೇಣುಕಾಚಾರ್ಯ ಕುಟುಂಬದವರ ಭೇಟಿಯ ವೇಳೆ ಸಿಎಂ ಚರ್ಚೆ ನಡೆಸಿ ಸಿಐಡಿ ತನಿಖೆ ಬಗ್ಗೆ ಘೋಷಣೆ ಮಾಡುವ ಸಾಧ್ಯತೆ ಇದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...