ಸರ್ಕಾರಿ ಕೆಲಸ ಕೊಡಿಸುವುದಾಗಿ ಯುವಕರಿಗೆ ವಂಚನೆ: ಸಿಐಡಿ ಅಧಿಕಾರಿ ಅರೆಸ್ಟ್

ಬೆಂಗಳೂರು: ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಯುವಕರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಸಿಎಡಿ ಘಟಕದ ಸೆಕ್ಷನ್ ಅಧೀಕ್ಷಕಿ ಸೇರಿ ಇಬ್ಬರನ್ನು ವಿಜಯನಗರ ಠಾಣೆ ಪೋಲೀಸರು ಬಂಧಿಸಿದ್ದಾರೆ.

ಬೆಂಗಳೂರಿನ ಸಿಐಡಿ ಘಟಕದ ಆಡಳಿತ ವಿಭಾಗದ ಸೆಕ್ಷನ್ ಸೂಪರಿಂಟೆಂಡೆಂಟ್ ಬಿ.ಎಸ್. ಅನಿತಾ(42) ಮತ್ತು ಮಧ್ಯವರ್ತಿ ರಾಮಚಂದ್ರ ಭಟ್(56) ಬಂಧಿತ ಆರೋಪಿಗಳಾಗಿದ್ದಾರೆ. ಚಿಕ್ಕಮಗಳೂರಿನ ಸುನಿಲ್ ಅವರು ನೀಡಿದ ದೂರು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

2021 ರಲ್ಲಿ ಸ್ನೇಹಿತ ಮಂಜುನಾಥ್ ಮೂಲಕ ಸುನಿಲ್ ಗೆ ರಾಮಚಂದ್ರ ಭಟ್ ಪರಿಚಯವಾಗಿದ್ದು, ಬೆಂಗಳೂರಿನ ಸಿಐಡಿ ಘಟಕದ ಅಧಿಕಾರಿ ಅನಿತಾ ಅವರ ಪರಿಚಯವಿದೆ. ಅವರಿಗೆ ಕೆಪಿಎಸ್ಸಿ ಮತ್ತು ಸರ್ಕಾರದ ಉನ್ನತ ಹುದ್ದೆಯಲ್ಲಿರುವ ಪ್ರಭಾವಿ ವ್ಯಕ್ತಿಗಳ ಸಂಪರ್ಕವಿದ್ದು, ಸರ್ಕಾರಿ ಕೆಲಸ ಕೊಡಿಸುತ್ತೇವೆ ಎಂದು ನಂಬಿಸಿ ಹಂತ ಹಂತವಾಗಿ 40 ಲಕ್ಷ ರೂಪಾಯಿ ಹಣ ಪಡೆದುಕೊಂಡಿದ್ದರು. ಆದರೆ, ಯಾವುದೇ ಕೆಲಸ ಕೊಡಿಸಿರಲಿಲ್ಲ. ಹಣ ಕೇಳಿದಾಗ ಬೆದರಿಕೆ ಹಾಕಿದ್ದರು. ಇದೇ ರೀತಿ ಅನಿತಾ ವಿಜಯಪುರ ಬಾಗಲಕೋಟೆ ಗದಗ ಜಿಲ್ಲೆಯ ಹಲವರಿಗೆ ವಂಚಿಸಿರುವುದು ಬೆಳಕಿಗೆ ಬಂದಿದೆ. ವಂಚನೆಗೊಳಗಾದವರು ವಿಜಯನಗರ ಠಾಣೆಗೆ ಹಾಜರಾಗಿ ದೂರು ನೀಡುವಂತೆ ಪೊಲೀಸರು ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read