
ಬೆಂಗಳೂರು: 545 ಪಿಎಸ್ಐ ಹುದ್ದೆಗಳ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಡಿಜಿಪಿ ಅಮೃತ್ ಪಾಲ್ ಆಪ್ತರ ಮನೆಗಳ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೃತ್ ಪಾಲ್ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಹಲವು ಅಭ್ಯರ್ಥಿಗಳಿಂದ ಹಣ ಪಡೆದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ತನಿಖೆ ವೇಳೆಯಲ್ಲಿ ಆಪ್ತರ ಮೂಲಕ ಡೀಲಿಂಗ್ ನಡೆಸಿರುವುದು ಬೆಳಕಿಗೆ ಬಂದಿದೆ. ಹೀಗಾಗಿ ಕೆಲವು ಆಪ್ತರ ಮನೆಗಳ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಅಮೃತ್ ಪಾಲ್ ಅವರ ಆಪ್ತರೆನ್ನಲಾದ ಆನಂದ್, ಶಂಭುಲಿಂಗ ಅವರ ಮನೆಗಳ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದೆ.