
ಬೆಂಗಳೂರು: ಶಿವಮೊಗ್ಗ ತಾಲ್ಲೂಕಿನ ಹುಣಸೋಡು ಕಲ್ಲು ಕ್ವಾರೆ ಪ್ರದೇಶದಲ್ಲಿ ಸ್ಪೋಟ ಸಂಭವಿಸಿದ ಘಟನೆ ಮಾಸುವ ಮೊದಲೇ ರಾಜ್ಯದಲ್ಲಿ ಮತ್ತೊಂದು ಜಿಲೆಟಿನ್ ಸ್ಪೋಟ ದುರಂತ ಸಂಭವಿಸಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಳ್ಳಿ ಗ್ರಾಮದ ಬಳಿ ಜಿಲೆಟಿನ್ ಸ್ಫೋಟಗೊಂಡಿದೆ. ಗುಡಿಬಂಡೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ರಾತ್ರಿ 12 ಗಂಟೆಗೆ ಭಾರೀ ಸ್ಪೋಟ ಸಂಭವಿಸಿ ಐವರು ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಪೋಟದ ತೀವ್ರತೆಗೆ ಹತ್ತಾರು ಕಿಲೋಮೀಟರ್ ದೂರದವರೆಗೂ ಭೂಮಿ ಕಂಪಿಸಿದೆ.