ಬೆಂಗಳೂರು: ಐದು ವರ್ಷ ನಿಯೋಜನೆ ಪೂರ್ಣಗೊಳಿಸಿದ ಅಧಿಕಾರಿಗಳು, ಸಿಬ್ಬಂದಿಯನ್ನು ಕೂಡಲೇ ಮಾತೃ ಇಲಾಖೆಗೆ ವಾಪಸ್ ಕರೆಸಿಕೊಳ್ಳಲು ಕ್ರಮ ಕೈಗೊಳ್ಳುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದೆ.
ನಿಯೋಜನೆ ಮೇರೆಗೆ ಬೇರೆ ಇಲಾಖೆಗೆ ತೆರಳುವವರ ಅವಧಿಯನ್ನು 5 ವರ್ಷಕ್ಕಿಂತ ಹೆಚ್ಚಿನ ಅವಧಿಗೆ ವಿಸ್ತರಿಸಬಾರದು. ನಿಯೋಜನೆ ಮೇರೆಗೆ 5 ವರ್ಷದ ಅವಧಿಗೆ ತೆರಳಿದ ನಂತರ ಎರಡು ವರ್ಷ ಅವರು ಮಾತೃ ಇಲಾಖೆಯಲ್ಲಿ ಕೆಲಸ ಮಾಡಬೇಕು.
ಅಲ್ಲದೇ. ಈಗಾಗಲೇ ನಿಯೋಜನೆ ಮೇಲೆ ತೆರಳಿ 5 ವರ್ಷ ಪೂರ್ಣಗೊಳಿಸಿದ ಸಿಬ್ಬಂದಿಗಳು, ಅಧಿಕಾರಿಗಳನ್ನು ಮಾತ್ರ ಇಲಾಖೆಗೆ ಕರೆಸಿಕೊಳ್ಳಬೇಕು. ವೃಂದ ಮತ್ತು ನೇಮಕಾತಿಯಲ್ಲಿ ಬೇರೆ ಇಲಾಖೆಯಿಂದ ನಿಯೋಜನೆಗೆ ಅವಕಾಶ ಕಲ್ಪಿಸದಿರುವ ಹುದ್ದೆಗಳಿಗೆ ಯಾವುದೇ ಅಧಿಕಾರಿಗಳು ಸಿಬ್ಬಂದಿಯನ್ನು ನಿಯೋಜಿಸಬಾರದು ಎಂದು ಹೇಳಲಾಗಿದೆ.