ನವದೆಹಲಿ: ಚಂಡೀಗಢ ವಿಮಾನ ನಿಲ್ದಾಣದಲ್ಲಿ ನಟಿ, ನೂತನ ಸಂಸದೆ ಕಂಗನಾ ರನೌತ್ ಗೆ ಕಪಾಳಮೋಕ್ಷ ಮಾಡಿದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐಎಸ್‌ಎಫ್) ಮಹಿಳಾ ಕಾನ್‌ಸ್ಟೆಬಲ್ ಕುಲವಿಂದರ್ ಕೌರ್ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.
ಕುಲವಿಂದರ್ ಕೌರ್ ವಿರುದ್ಧ ಎಫ್‌ಐಆರ್ ಕೂಡ ದಾಖಲಾಗಿದೆ. ಸಿಐಎಸ್‌ಎಫ್ ಕಾನ್‌ಸ್ಟೆಬಲ್ ಕುಲ್ವಿಂದರ್ ಕೌರ್ ಅವರು, ಬಾಲಿವುಡ್ ನಟಿ ಕಂಗನಾ ರನೌತ್ ಬಗ್ಗೆ ಮಾತನಾಡುವ ವಿಡಿಯೋ ಕೂಡ ಕಾಣಿಸಿಕೊಂಡಿದೆ.
ರೈತರ ಆಂದೋಲನದಲ್ಲಿ ಭಾಗವಹಿಸುವ ಮಹಿಳೆಯರು ತಲಾ 100 ರೂಪಾಯಿಗಾಗಿ ಹೋಗುತ್ತಾರೆ ಎಂದು ಕಂಗನಾ ರನೌತ್ ಈ ಹಿಂದೆ ಹೇಳಿಕೆ ನೀಡಿದ್ದರು. ಆ ಸಮಯದಲ್ಲಿ ರೈತರ ಆಂದೋಲನದಲ್ಲಿ ಭಾಗಿಯಾಗಿದ್ದ ಮಹಿಳೆಯರಲ್ಲಿ ತನ್ನ ತಾಯಿಯೂ ಇದ್ದರು ಎಂದು ಕೌರ್ ವೀಡಿಯೊದಲ್ಲಿ ಹೇಳಿಕೊಂಡಿದ್ದಾರೆ.
ರಾಷ್ಟ್ರೀಯ ಮಹಿಳಾ ಆಯೋಗದ ಮುಖ್ಯಸ್ಥೆ ರೇಖಾ ಶರ್ಮಾ ಅವರು ಕಂಗನಾ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಲವಿಂದರ್ ಕೌರ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.