alex Certify ಪ್ರಾಣಾಪಾಯದಲ್ಲಿದ್ದ ಬಾಲಕಿಯನ್ನು ರಕ್ಷಿಸಿದ ಸಿಐಎಸ್‌ಎಫ್ ಕಾನ್ಸ್‌ಟೇಬಲ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಾಣಾಪಾಯದಲ್ಲಿದ್ದ ಬಾಲಕಿಯನ್ನು ರಕ್ಷಿಸಿದ ಸಿಐಎಸ್‌ಎಫ್ ಕಾನ್ಸ್‌ಟೇಬಲ್…!

ದೆಹಲಿಯ ನಿರ್ಮಾಣ್ ವಿಹಾರ್ ಮೆಟ್ರೋ ನಿಲ್ದಾಣದ ಹೊರಗೆ ಅಳವಡಿಸಿದ್ದ 20 ಅಡಿ ಕಬ್ಬಿಣದ ಗ್ರಿಲ್‌ನಲ್ಲಿ ಸಿಲುಕಿಕೊಂಡಿದ್ದ 10 ವರ್ಷದ ಬಾಲಕಿಯೊಬ್ಬಳನ್ನು, ಸಿಐಎಸ್‌ಎಫ್ ಕಾನ್ಸ್‌ಟೇಬಲ್ ಒಬ್ಬರು ರಕ್ಷಿಸಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾನುವಾರ ಸಂಜೆ 6 ಗಂಟೆ ಸುಮಾರಿಗೆ ಬಾಲಕಿ ನಿಲ್ದಾಣದ ಗೇಟ್ ಸಂಖ್ಯೆ 1ರ ಮೆಟ್ಟಿಲುಗಳ ಉದ್ದಕ್ಕೂ ನಿರ್ಮಿಸಲಾಗಿದ್ದ 20 ಅಡಿ ಎತ್ತರದ ಗ್ರಿಲ್ ಅನ್ನು ಗೋಡೆಯ ನೆರವಿನೊಂದಿಗೆ ಹತ್ತಿದ್ದಾಳೆ. ಈ ವೇಳೆ ಆಕೆ ಗ್ರಿಲ್‌ಗೆ ಸಿಲುಕಿಕೊಂಡಿದ್ದಾಳೆ. ಈ ಸಮಯದಲ್ಲಿ ಆ ಸ್ಥಳದಲ್ಲಿದ್ದ, ಸಿಐಎಸ್ಎಫ್ ಕಾನ್ಸ್‌ಟೇಬಲ್ ಎನ್‌ಕೆ ನಾಯಕ್ ಅವರು ಚುರುಕಾಗಿ ವರ್ತಿಸಿ, ಗ್ರಿಲ್‌ನಲ್ಲಿ ಸಿಲುಕಿಕೊಂಡಿದ್ದ ಬಾಲಕಿಯನ್ನು ರಕ್ಷಿಸಿದ್ದಾರೆ ಎಂದು ಹಿರಿಯ ಸಿಐಎಸ್‌ಎಫ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

BIG NEWS: ಕಾಂಗ್ರೆಸ್ ರಾಜಕೀಯ ಹಿತಾಸಕ್ತಿಗೆ ಸಂಕಷ್ಟಕ್ಕೀಡಾದ ಜನರು; ಪಾದಯಾತ್ರೆ ವಿರುದ್ಧ ಸಿಎಂ ಬೊಮ್ಮಾಯಿ ವಾಗ್ದಾಳಿ

ಇನ್ನು ದೆಹಲಿ-ಎನ್‌ಸಿಆರ್‌ನಲ್ಲಿನ 130 ಕ್ಕೂ ಹೆಚ್ಚು ಮೆಟ್ರೋ ನಿಲ್ದಾಣಗಳಿಗೆ ಭಯೋತ್ಪಾದನಾ ನಿಗ್ರಹ ರಕ್ಷಣೆಯನ್ನು ಒದಗಿಸಲು ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆಯನ್ನು (ಸಿಐಎಸ್‌ಎಫ್) ನಿಯೋಜಿಸಲಾಗಿದೆ. ಇನ್ನು ಈ ಘಟನೆಯನ್ನು ಸೆರೆ ಹಿಡಿಯಲಾಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ನೆಟ್ಟಿಗರು ನಾಯಕ್ ಅವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...