alex Certify 1149 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

1149 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ: ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್(CISF) ಕಾನ್‌ಸ್ಟೆಬಲ್/ಫೈರ್ ಹುದ್ದೆಗೆ ಅರ್ಜಿ ಆಹ್ವಾನಿಸಿದೆ.

www.cisfrectt.in CISF ನ ಅಧಿಕೃತ ನೇಮಕಾತಿ ವೆಬ್‌ ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು. ನೇಮಕಾತಿ ಅಭಿಯಾನದಡಿ ಒಟ್ಟು 1149 ಖಾಲಿ ಹುದ್ದೆಗಳನ್ನು ಭರ್ತಿ ಮಾಡುತ್ತದೆ. ಆನ್‌ ಲೈನ್ ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 4, 2022 ರಂದು ಸಂಜೆ 5 ಗಂಟೆವರೆಗೆ.

ಅಭ್ಯರ್ಥಿಗಳು ವಿಜ್ಞಾನ ವಿಷಯದೊಂದಿಗೆ ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯದಿಂದ 12 ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಮಾರ್ಚ್ 4, 2022 ರಂತೆ ಅಭ್ಯರ್ಥಿಗಳ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ ವಯೋಮಿತಿ 23 ವರ್ಷಗಳು.

21,700 ರೂ.ನಿಂದ 69,100 ವೇತನ ಶ್ರೇಣಿ ಇದೆ.

ಅಭ್ಯರ್ಥಿಗಳನ್ನು ದೈಹಿಕ ದಕ್ಷತೆ ಪರೀಕ್ಷೆ (PET), ದೈಹಿಕ ಗುಣಮಟ್ಟ ಪರೀಕ್ಷೆ (PST), OMR/ಕಂಪ್ಯೂಟರ್ ಆಧಾರಿತ ಪರೀಕ್ಷೆ(CBT) ಅಡಿಯಲ್ಲಿ ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ (DV) ವಿವರವಾದ ವೈದ್ಯಕೀಯ ಪರೀಕ್ಷೆ (DME) ಮತ್ತು ವಿಮರ್ಶೆ ವೈದ್ಯಕೀಯ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...