alex Certify JOB NEWS: ಪಿಯು ಪಾಸಾದವರಿಗೆ ಬಂಪರ್ ಆಫರ್; CISF ನಲ್ಲಿ ಉದ್ಯೋಗಾವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

JOB NEWS: ಪಿಯು ಪಾಸಾದವರಿಗೆ ಬಂಪರ್ ಆಫರ್; CISF ನಲ್ಲಿ ಉದ್ಯೋಗಾವಕಾಶ

ನವದೆಹಲಿ: ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1149 ಕಾನ್ಸ್ ಟೇಬಲ್/ಫೈರ್ ಮೆನ್ ಗಳ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು 12ನೇ ತರಗತಿ ಉತ್ತೀರ್ಣ ಅಥವಾ ಸೈನ್ಸ್ ಸ್ಟ್ರೀಮ್ ನಿಂದ ಮಾನ್ಯತೆ ಪಡೆದ ಮಂಡಳಿ/ವಿಶ್ವವಿದ್ಯಾಲಯದಿಂದ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ಆಧಾರ್ ಕಾರ್ಡ್ ಕಳೆದುಹೋಗಿದೆಯೇ? ಚಿಂತೆ ಬಿಡಿ ಇಲ್ಲಿದೆ ಗುಡ್ ನ್ಯೂಸ್

ಅಭ್ಯರ್ಥಿಗಳ ವಯೋಮಿತಿ 18-23 ವರ್ಷಗಳ ಒಳಗಿರಬೇಕು. ಮೀಸಲಾತಿ ವರ್ಗಗಳ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ, ವೈದ್ಯಕೀಯ ಪರೀಕ್ಷೆ, ದೈಹಿಕ ದಕ್ಷತೆ ಪರೀಕ್ಷೆ, ದೈಹಿಕ ಗುಣಮಟ್ಟದ ಪರೀಕ್ಷೆ, ದಾಖಲೆ ಪರಿಶೀಲನೆ ಆಧಾರದ ಮೇಲೆ ಆಯ್ಕೆ ನಡೆಯಲಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 21,700 ರಿಂದ 69,100 ರೂ ವರೆಗೆ ಮಾಸಿಕ ವೇತನ ಸಿಗಲಿದೆ.

ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಮಾರ್ಚ್ 4ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ cisfrectt.inಗೆ ಭೇಟಿ ನೀಡಬಹುದು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...