alex Certify BIG BREAKING NEWS: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಶೀಘ್ರ -ಅಮಿತ್ ಶಾ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING NEWS: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಶೀಘ್ರ -ಅಮಿತ್ ಶಾ ಘೋಷಣೆ

ನವದೆಹಲಿ: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಶೀಘ್ರವೇ ಅನುಷ್ಠಾನಗೊಳಿಸಲಾಗುವುದು ಎಂದು ಕೇಂದ್ರ ಗೃಹಸಚಿವ ಹಾಗೂ ನಾಯಕ ಅಮಿತ್ ಶಾ ಘೋಷಿಸಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಆಯೋಜಿಸಿದ್ದ ಪಕ್ಷದ ರ್ಯಾಲಿಯಲ್ಲಿ ಅವರು ಈ ಬಗ್ಗೆ ಘೋಷಣೆ ಮಾಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಯಾಗುವುದರಿಂದ ದೇಶದ ಮುಸ್ಲಿಮರನ್ನು ಪೌರತ್ವದಿಂದ ತೆಗೆದುಹಾಕುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಹೋರಾಟ ನಡೆಯುತ್ತಿದ್ದ ಹೊತ್ತಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡ ಬಳಿಕ ಹೋರಾಟ ತಣ್ಣಗಾಗಿತ್ತು. ಕೊರೋನಾ ಲಸಿಕೆ ಕಾರ್ಯಕ್ರಮ ಮುಗಿದ ನಂತರ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ತರಲಾಗುವುದು ಎಂದು ಅಮಿತ್ ಶಾ ತಿಳಿಸಿದ್ದಾರೆ.

ಮಾಟುವಾ ಸಮುದಾಯದ ಭದ್ರಕೋಟೆಯಾಗಿರುವ ಪಶ್ಚಿಮಬಂಗಾಳದ ಟಾಕೂರ್ ನಗರ ಪಟ್ಟಣದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ, 2018 ರಲ್ಲಿ ನಾವು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಬಗ್ಗೆ ಭರವಸೆ ನೀಡಿದ್ದೇವೆ. ಹಾಗಾಗಿ 2019 ರಲ್ಲಿ ಜನ ನಮಗೆ ಬೆಂಬಲ ನೀಡಿದ್ದಾರೆ. 2020 ರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಬಂದಿದೆ. ಆದರೆ, ಪಶ್ಚಿಮಬಂಗಾಳ ಮುಖ್ಯಮಂತ್ರಿ ನಾವು ಪೌರತ್ವ ತಿದ್ದುಪಡಿ ಕಾಯ್ದೆ ಜಾರಿಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದರು. ನಾನು ಮತ್ತೆ ಭರವಸೆ ನೀಡುತ್ತೇನೆ. ಕೊರೋನಾ ವ್ಯಾಕ್ಸಿನೇಷನ್ ಕಾರ್ಯ ಮುಗಿದ ಕೂಡಲೇ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಲಾಗುವುದು ಎಂದು ಘೋಷಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆಯಿಂದ ನಮ್ಮ ಮುಸ್ಲಿಮ್ ಸಹೋದರರ ಪೌರತ್ವವನ್ನು ಕಸಿದುಕೊಳ್ಳುವುದಿಲ್ಲ ಎಂದು ನಾನು ಮತ್ತೊಮ್ಮೆ ಘೋಷಿಸುತ್ತೇನೆ. ಕಾಯ್ದೆಯಲ್ಲಿ ಅಂತಹ ಯಾವುದೇ ಷರತ್ತು ಇಲ್ಲ. ಇದು ಪೌರತ್ವ ನೀಡುವ ಕಾಯ್ದೆಯಾಗಿದೆಯೇ ಹೊರತು ಕಸಿದುಕೊಳ್ಳುವ ಕಾಯ್ದೆಯಲ್ಲ ಎಂದು ಅವರು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...