
ಬೆಂಗಳೂರು: ಕರ್ತವ್ಯ ನಿರತ ಪೌರಕಾರ್ಮಿಕರಿಗೆ ಗೂಡ್ಸ್ ವಾಹನ ಡಿಕ್ಕಿ ಹೊಡೆದ ಘಟನೆ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ನಡೆದಿದೆ.
ಅಪಘಾತದಲ್ಲಿ ಪೌರಕಾರ್ಮಿಕ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಇನ್ನಿಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಸ್ತೆಯ ಪಕ್ಕದಲ್ಲಿ ನಡೆದು ಹೋಗುತ್ತಿದ್ದ ಪೌರಕಾರ್ಮಿಕರಿಗೆ ವೇವವಾಗಿ ಬಂದ ಗೂಡ್ಸ್ ವಾಹನ ಡಿಕ್ಕಿಹೊಡೆದಿದೆ.
ಗಂಭೀರವಾಗಿ ಗಾಯಗೊಂಡಿರುವ ಮಹಿಳೆ ರಸ್ತೆಯಲ್ಲಿಯೇ ನರಳಾಟ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ಬ್ಯಾಟರಾಯನಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.