![](https://kannadadunia.com/wp-content/uploads/2023/09/bjp-congress.png)
ತುಮಕೂರು : ತುಮಕೂರಿನಲ್ಲಿ ಇಂದು ಬಿಜೆಪಿ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆಯಾಗಿರುವ ಘಟನೆ ನಡೆದಿದೆ.
ತುಮಕೂರಿನ ಎಪಿಎಂಸಿ ಯಾರ್ಡ್ ನಲ್ಲಿ ಕೊಬ್ಬರಿ ಖರೀದಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮದಲ್ಲಿ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆಯಾಗಿದೆ. ಬಿಜೆಪಿ ಕಾರ್ಯಕರ್ತರು ಪಕ್ಷದ ಶಾಲು ಹಾಕಿಕೊಂಡು ಬಂದಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ವಿರೋಧಿಸಿದ್ದಾರೆ. ಸರ್ಕಾರಿ ಕಾರ್ಯಕ್ರಮದಲ್ಲಿ ಪಕ್ಷದ ಶಾಲು ಹಾಕದಂತೆ ಹೇಳಿದ್ದಾರೆ. ಈ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.
ಕಾರ್ಯಕ್ರಮದಲ್ಲಿ ಸಚಿವ ಡಾ.ಪರಮೇಶ್ವರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸೇರಿದಂತೆ ಹಲವರು ಭಾಗಿಯಾಗಿದ್ದರು. ಈ ವೇಳೆ ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ನಡೆದಿದೆ.