alex Certify BIG NEWS : ಚಿಕ್ಕಮಗಳೂರಿನಲ್ಲಿ ಕೇಸರಿ ಧ್ವಜ ಕಟ್ಟುವ ವಿಚಾರಕ್ಕೆ ಎರಡು ಕೋಮಿನ ನಡುವೆ ಗಲಾಟೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಚಿಕ್ಕಮಗಳೂರಿನಲ್ಲಿ ಕೇಸರಿ ಧ್ವಜ ಕಟ್ಟುವ ವಿಚಾರಕ್ಕೆ ಎರಡು ಕೋಮಿನ ನಡುವೆ ಗಲಾಟೆ

ಚಿಕ್ಕಮಗಳೂರು : ಚಿಕ್ಕಮಗಳೂರಿನಲ್ಲಿ ಕೇಸರಿ ಧ್ವಜ ಕಟ್ಟುವ ವಿಚಾರಕ್ಕೆ ಎರಡು ಕೋಮಿನ ನಡುವೆ ಗಲಾಟೆ ನಡೆದಿದ್ದು, ಇನ್ನೊಂದು ಕೋಮಿನ ಮೇಲೆ ಹಲ್ಲೆ ನಡೆಸಲಾಗಿದೆ ಎಂಬ ಆರೋಪ ಕೇಳಿಬಂದಿದೆ.

ಚಿಕ್ಕಮಗಳೂರು ತಾಲೂಕಿನ ಹಾಂದಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ದತ್ತಜಯಂತಿ ಹಿನ್ನೆಲೆ ಗ್ರಾಮದಲ್ಲಿ ದತ್ತ ಮಾಲಾಧಾರಿಗಳು ಧ್ವಜ ಕಟ್ಟುತ್ತಿದ್ದಾಗ ಅನ್ಯ ಕೋಮಿನ ಯುವಕರು ಬಂದು ಅಡ್ಡಿ ಪಡಿಸಿ ಗಲಾಟೆ ನಡೆಸಿದ್ದಾರೆ.

ಹಾಂದಿ ಗ್ರಾಮದ ರಾಷ್ಟ್ರೀಯ   ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಮಸೀದಿ ಬಳಿ ಕೇಸರಿ ಧ್ವಜ ಕಟ್ಟದಂತೆ ಅನ್ಯಕೋಮಿನ ಯುವಕರು ಅಡ್ಡಿ ಪಡಿಸಿದ್ದಾರೆ .ದತ್ತ ಮಾಲಾಧಾರಿಗಳ ಮೇಲೆ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಈ ವೇಳೆ ದತ್ತಮಾಲಾಧಾರಿಗಳು ಹಾಗೂ ಅನ್ಯಕೋಮಿನ ಯುವಕರ ನಡುವೆ ಗಲಾಟೆ ನಡೆದಿದೆ. ಘಟನೆ ನಡೆದ ಸ್ಥಳಕ್ಕೆ ಆಲ್ದೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...