ಬೆಂಗಳೂರು: 5, 8, 9ನೇ ತರಗತಿಗಳ ಬೋರ್ಡ್ ಪರೀಕ್ಷೆ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಲು ಪ್ರತಿವಾದಿಗಳು ಮನವಿ ಸಲ್ಲಿಸಿದ್ದಾರೆ.
ಖಾಸಗಿ ಶಾಲೆಗಳ ಸಂಘದಿಂದ ಹೈಕೋರ್ಟ್ ಗೆ ಮನವಿ ಸಲ್ಲಿಸಲಾಗಿದೆ. ಸುಪ್ರೀಂ ಕೋರ್ಟ್ ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸೂಚನೆ ನೀಡಿದೆ. ವಿಸ್ತೃತ ಪೀಠಕ್ಕೆ ಕೇಸ್ ವರ್ಗಾಯಿಸಲು ಹೈಕೋರ್ಟ್ ನಿರಾಕರಿಸಿದೆ.
ಬೋರ್ಡ್ ಪರೀಕ್ಷೆಗೆ ಅನುಮತಿ ಕೋರಿ ಪೋಷಕರಿಂದಲೂ ಅರ್ಜಿ ಸಲ್ಲಿಕೆಯಾಗಿದೆ. ಏಕಸದಸ್ಯ ಪೀಠ ಶಾಲೆಗಳ ಬೋರ್ಡ್ ಪರೀಕ್ಷೆಯನ್ನು ರದ್ದುಪಡಿಸಿತ್ತು. ಏಕಸದಸ್ಯ ಪೀಠದ ಆದೇಶಕ್ಕೆ ವಿಭಾಗೀಯ ಪೀಠ ತಡೆ ನೀಡಿತ್ತು.
ವಿಭಾಗೀಯ ಪೀಠದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿತ್ತು. ಮೇಲ್ಮನವಿ ವಿಚಾರಣೆ ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿತ್ತು. ಮೇಲ್ಮನವಿ ವಿಚಾರಣೆಯನ್ನು ಹೈಕೋರ್ಟ್ ನಾಳೆಗೆ ಮುಂದೂಡಿದೆ.