ಶಾಲಾ ಪ್ರಾರ್ಥನೆ ವೇಳೆ 9ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಒಡಿಶಾದ ಭದ್ರಕ್ ಜಿಲ್ಲೆಯಲ್ಲಿ ಶನಿವಾರದಂದು ನಡೆದಿದೆ.
ಬನ್ಸಾರದಲ್ಲಿರುವ ಸರ್ಕಾರಿ ಶಾಲೆಯಲ್ಲಿ ಬೆಳಗಿನ ಪ್ರಾರ್ಥನೆ ನಡೆಯುತ್ತಿರುವ ಸಂದರ್ಭದಲ್ಲಿ ವಿದ್ಯಾರ್ಥಿನಿ ಏಕಾಏಕಿ ಕುಸಿದು ಬಿದ್ದು ಪ್ರಜ್ಞಾಹೀನಳಾಗಿದ್ದಾಳೆ.
ಕೂಡಲೇ ಆಕೆಯನ್ನು ಶಾಲೆಯ ಕೊಠಡಿಗೆ ಕರೆದುಕೊಂಡು ಹೋದ ಶಿಕ್ಷಕರು ಪ್ರಥಮ ಚಿಕಿತ್ಸೆ ನೀಡಿದರೂ ಆಕೆ ಸ್ಪಂದಿಸಿಲ್ಲ. ಬಳಿಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಅವರ ಸಲಹೆ ಮೇರೆಗೆ ಜಿಲ್ಲಾ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಷ್ಟರಲ್ಲಾಗಲೇ ವಿದ್ಯಾರ್ಥಿನಿ ಮೃತಪಟ್ಟಿದ್ದಳು ಎಂದು ಹೇಳಲಾಗಿದೆ.