
14 ವರ್ಷದ ಬಾಲಕಿಯನ್ನು ಅಪಹರಿಸಿ ಅತ್ಯಾಚಾರವೆಸಗಿರೋ ಘಟನೆ ಮಧ್ಯಪ್ರದೇಶದ ಇಂದೋರ್‌ನ ಗ್ರಾಮಾಂತರ ಪ್ರದೇಶದಲ್ಲಿ ನಡೆದಿದೆ.
ಅತ್ಯಾಚಾರದ ನಂತರ ಬಾಲಕಿ ಸತ್ತಿದ್ದಾಳೆ ಎಂದು ಭಾವಿಸಿದ ಆರೋಪಿ ಬಾಲಕಿಯನ್ನು ಕಾಡಿನಲ್ಲಿ ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದ. ಪೊಲೀಸರು ಆರೋಪಿಯನ್ನು ಬಂಧಿಸಿದ್ದು ಸಂತ್ರಸ್ತೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.
ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾದ 9 ನೇ ತರಗತಿ ವಿದ್ಯಾರ್ಥಿನಿಯ ಬಗ್ಗೆ ಪೊಲೀಸರಿಗೆ ಮಾಹಿತಿ ಬಂದಾಗ ವಿಷಯ ಬೆಳಕಿಗೆ ಬಂದಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಬಾಲಕಿಯನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಆರೋಪಿ ಭನ್ ಸಿಂಗ್ ನನ್ನು ಬಂಧಿಸಲಾಗಿದ್ದು ಪೋಕ್ಸೋ ಕಾಯಿದೆಯಡಿ ಪ್ರಕರಣ ದಾಖಲಿಸಲಾಗಿದೆ.