ಬೆಂಗಳೂರು: ರಾಜ್ಯದಲ್ಲಿ 9 ರಿಂದ 12 ನೇ ತರಗತಿ ವಿದ್ಯಾರ್ಥಿಗಳಿಗೆ ಆಗಸ್ಟ್ 23 ರಿಂದ ಭೌತಿಕ ತರಗತಿಗಳು ಆರಂಭವಾಗಲಿವೆ. ಆದರೆ, ಭೌತಿಕ ತರಗತಿ ಆರಂಭವಾದರೂ ಹಾಜರಾತಿ ಕಡ್ಡಾಯವಾಗಿರುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
9, 10, 11 ಮತ್ತು 12 ನೇ ತರಗತಿಗಳು ಆರಂಭವಾಗಲಿದ್ದು, ಪರಿಸ್ಥಿತಿಯನ್ನು ಅವಲೋಕಿಸಿ ತಾಂತ್ರಿಕ ಸಲಹಾ ಸಮಿತಿ ಮತ್ತು ಆರೋಗ್ಯ ಇಲಾಖೆಯ ಅಭಿಪ್ರಾಯ ಪಡೆದು ಸಿಎಂ ಬಸವರಾಜ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ ಸೆ. 1 ರಿಂದ 8 ನೇ ತರಗತಿಯ ಮಕ್ಕಳಿಗೆ ಭೌತಿಕ ತರಗತಿಗಳನ್ನು ಪ್ರಾರಂಭಿಸುವ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.