ಚಿಕ್ಕಮಗಳೂರು: ಬೆಳಗ್ಗೆಯಿಂದ ಸಂಜೆಯವರೆಗೆ 6 ರಿಂದ 12ನೇ ತರಗತಿ ನಡೆಸಲು ಸೂಚನೆ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಜೆವರೆಗೆ ಭೌತಿಕ ತರಗತಿ ನಡೆಸಲು ಸೂಚನೆ ನೀಡಲಾಗಿದ್ದು, ದಸರಾ ಹಬ್ಬದ ನಂತರ ಈ ಬಗ್ಗೆ ಕ್ರಮಕೈಗೊಳ್ಳಲಾಗುವುದು. ಭೌತಿಕ ತರಗತಿಗೆ ಹಾಜರಾಗುವಂತೆ ವಿದ್ಯಾರ್ಥಿಗಳಿಗೆ ಬಲವಂತ ಮಾಡಬಾರದು ಎಂದರು.
ಅನೇಕ ಜಿಲ್ಲೆಗಳಲ್ಲಿ ಕೊರೋನಾ ಶೂನ್ಯಕ್ಕೆ ಇಳಿದಿದೆ. ಶಾಲೆ ಆರಂಭದ ಬಳಿಕ ವಿದ್ಯಾರ್ಥಿಗಳು ಖುಷಿಯಿಂದ ಬರುತ್ತಿದ್ದಾರೆ. ಯಾವುದೇ ತೊಂದರೆಯಾಗಿಲ್ಲ ಎಂದು ಅವರು ಹೇಳಿದ್ದಾರೆ.