
ಬೆಂಗಳೂರು: ರಾಜ್ಯದಲ್ಲಿ ಫೆಬ್ರವರಿ 1 ರಿಂದ 9 ಮತ್ತು 12 ನೇ ತರಗತಿಗಳನ್ನು ಆರಂಭಿಸಲು ಸರ್ಕಾರ ಕ್ರಮಕೈಗೊಂಡಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಈ ಬಗ್ಗೆ ಮಾಹಿತಿ ನೀಡಿ, ಫೆಬ್ರವರಿ 1 ರಿಂದ ರಾಜ್ಯದಲ್ಲಿ 9 ರಿಂದ 12 ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಇಡೀ ದಿನ ಶಾಲೆ-ಕಾಲೇಜುಗಳಲ್ಲಿ ತರಗತಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಹೇಳಿದ್ದಾರೆ.
ಆರರಿಂದ ಎಂಟನೇ ತರಗತಿ ಮಕ್ಕಳಿಗೆ ವಿದ್ಯಾಗಮ ಯೋಜನೆಯಡಿ ಕಲಿಕೆ ಮುಂದುವರೆಯಲಿದೆ. ಉಳಿದ ತರಗತಿಗಳನ್ನು ಆರಂಭಿಸುವ ಕುರಿತು ಫೆಬ್ರವರಿ ಎರಡನೇ ವಾರ ನಿರ್ಧಾರ ಕೈಗೊಳ್ಳಲಾಗುವುದು. ಜನವರಿ 1ರಿಂದ 10 ಮತ್ತು 12ನೇ ತರಗತಿ ಮಕ್ಕಳಿಗೆ ಶಾಲೆ, ಕಾಲೇಜ್ ಆರಂಭಿಸಿದ್ದು ಫೆಬ್ರವರಿ 1 ರಿಂದ 9 ಮತ್ತು 12 ನೇ ತರಗತಿ ಶುರುವಾಗಲಿವೆ.