ಬೆಂಗಳೂರು : ಈ ತಿಂಗಳೊಳಗೆ ಬೆಂಗಳೂರಿನ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ಚಿಸಿ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರು ನಗರದಲ್ಲಿ ವಾರ್ಡ್ ರಸ್ತೆಗಳಲ್ಲಿ 5500 ಗುಂಡಿಗಳು ಬಿದ್ದಿದ್ದು, ಅವುಗಳನ್ನು ಮುಚ್ಚಬೇಕು, ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳಲ್ಲಿ 557 ಗುಂಡಿಗಳಿವೆ. ಎಲ್ಲವನ್ನೂ ಈ ತಿಂಗಳಿನಲ್ಲೇ ಭರ್ತಿ ಮಾಡಬೇಕು ಎಂದು ಸೂಚಿಸಲಾಗಿದೆ. ಮುಂಗಾರು ಮಳೆಗೂ ಮುನ್ನ ಪ್ರವಾಹ ಉಂಟಾಗಬಾರದೆಂದು ಚುನಾವಣಾ ಆಯೋಗದಿಂದ ಅನುಮತಿ ಪಡೆದು 7-8 ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗಿದೆ ಎಂದು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ.
ಜೂನ್ ತಿಂಗಳಿನಿಂದ ಮುಂಗಾರು ಆರಂಭವಾಗಲಿದೆ. ಮೇ ತಿಂಗಳಿನಲ್ಲಿ ವಾಡಿಕೆಗಿಂತ ಹೆಚ್ಚು ಮಳೆ ಆಗಿದೆ. ಹಾಗಾಗಿ ಮಳೆಗಾಲ ಆರಂಭಕ್ಕೆ ಮೊದಲೇ ಸುರಿದ ಮಳೆಯಿಂದಾಗಿ ಬೆಂಗಳೂರಿನ ಹಲವೆಡೆ ಪ್ರವಾಹ ಪರಿಸ್ಥಿತಿ ಎದುರಾಗಿದೆ ಎಂಬ ಮಾಹಿತಿ ಆಧರಿಸಿ ಪರಿಸ್ಥಿತಿ ವೀಕ್ಷಣೆಗೆ ಸ್ಥಳಕ್ಕೆ ಭೇಟಿ ನೀಡಿದ್ದೆವು. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೂ ಯಲಹಂಕಕ್ಕೆ ಭೇಟಿ ನೀಡಿದ್ದಾರೆ. ಅಲ್ಲಿ 20 ಮನೆಗಳಿಗೆ ನೀರು ನುಗ್ಗಿದೆ ಎಂದು ವರದಿಯಾಗಿತ್ತು. ಯಲಹಂಕ ಕೆರೆಗೆ ನೀರು ಹೋಗುವಂತೆ ಮಾಡಲು ಅರಣ್ಯ ಇಲಾಖೆಯ ಅಧಿಕಾರಿಗಳು, ಬಿಬಿಎಂಪಿಗೆ ನೀರು ಹೋಗಲು ಅನುವು ಮಾಡಿಕೊಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.