ಗದಗ: ಹಾವೇರಿಯಲ್ಲಿ ಶಾಸಕ ಪ್ರಕಾಶ ಕೋಳಿವಾಡ ಅವರ ಸಂಸ್ಥೆಯಿಂದ ಮೋಡ ಬಿತ್ತನೆ ಮಾಡಲಾಗುತ್ತಿದೆ. ಇದಕ್ಕೆ ಚಾಲನೆ ನೀಡಿದ ಸಚಿವ ಹೆಚ್.ಕೆ. ಪಾಟೀಲ ಅವರು ಗದಗ ಜಿಲ್ಲೆಯಲ್ಲಿಯೂ ಮೋಡ ಬಿತ್ತನೆ ಮಾಡುವುದಾಗಿ ತಿಳಿಸಿದ್ದಾರೆ.
ಗದಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋಡ ಬಿತ್ತನೆಗೆ ಜಿಲ್ಲಾಧಿಕಾರಿಗಳ ಅನುಮತಿ ಕೇಳಿದ್ದು, ಅವರು ಅನುಮತಿ ನೀಡಿದಲ್ಲಿ ಮೋಡ ಬಿತ್ತನೆ ಮಾಡುತ್ತಿರುವ ಏಜೆನ್ಸಿಯೊಂದಿಗೆ ಮಾತನಾಡಿ ಗದಗ ಜಿಲ್ಲೆಯಲ್ಲಿಯೂ ಮೋಡ ಬಿತ್ತನೆಗೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮೋಡ ಬಿತ್ತನೆ ಒಂದು ವೈಜ್ಞಾನಿಕ ಪ್ರಕ್ರಿಯೆಯಾಗಿದ್ದು, 2003ರಲ್ಲಿ ನಾನು ನೀರಾವರಿ ಸಚಿವನಾಗಿದ್ದಾಗ 85 ದಿನ ಮೋಡ ಬಿತ್ತನೆ ಮಾಡಿಸಿದ್ದು, 60 ದಿನ ಶೇಕಡ 22ರಷ್ಟು ಮಳೆಯಾಗಿತ್ತು. 2017 -18ರಲ್ಲಿಯೂ ಮೋಡ ಬಿತ್ತನೆ ಪ್ರಯೋಗ ಯಶಸ್ವಿಯಾಗಿದೆ. ವಿಜ್ಞಾನ ಮತ್ತು ಪ್ರಯೋಗದ ಬಗ್ಗೆ ಹೆಚ್ಚು ಮನವರಿಕೆ ಮಾಡಿಕೊಡಬೇಕಿದೆ. ಗದಗದಲ್ಲಿ ಎರಡು ದಿನ ಉತ್ತಮ ಮಳೆಯಾಗಿದ್ದು, ಮಳೆ ಕೊರತೆ ಆದಲ್ಲಿ ಮೋಡ ಬಿತ್ತನೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.