ಹಾವೇರಿ: ಹಾವೇರಿ ಜಿಲ್ಲೆಯಲ್ಲಿ ಸೋಮವಾರದಿಂದ ಮೂರು ದಿನ ಮೋಡ ಬಿತ್ತನೆ ಮಾಡಲಾಗುವುದು. ರಾಣೆಬೆನ್ನೂರು ಶಾಸಕ ಪ್ರಕಾಶ ಕೋಳಿವಾಡ ಸ್ವಂತ ಖರ್ಚಿನಲ್ಲೇ ಮೋಡ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಪಕ್ಷಾತೀತ ಕಾಯಕದ ಕನಸು(ಪಿಕೆಕೆ) ಸಂಸ್ಥೆಯ ವತಿಯಿಂದ ಮೋಡ ಬಿತ್ತನೆ ಮಾಡಲಾಗುವುದು. ಜಿಲ್ಲಾಧಿಕಾರಿಗಳು ಮತ್ತು ಕೇಂದ್ರ ಸರ್ಕಾರದಿಂದ ಮೋಡ ಬಿತ್ತನೆಗಾಗಿ ಅನುಮತಿ ಪಡೆದುಕೊಳ್ಳಲಾಗಿದೆ.
ಸೆಪ್ಟೆಂಬರ್ 4 ರಂದು ಮಧ್ಯಾಹ್ನ 2 ಗಂಟೆಯಿಂದ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಕಾರ್ಯಾಚರಣೆ ಆರಂಭವಾಗಲಿದ್ದು, ಸ್ಥಳೀಯವಾಗಿ ಮೋಡಗಳ ಲಭ್ಯತೆಗೆ ಅನುಗುಣವಾಗಿ ಅಲ್ಲಲ್ಲಿ ಮೋಡ ಬಿತ್ತನೆ ಮಾಡಲಾಗುವುದು. ಹಾವೇರಿ ಜಿಲ್ಲೆಯಲ್ಲಿ ಮೂರು ದಿನಗಳ ಕಾಲ ಹೆಚ್ಚಿನ ಮೋಡಗಳು ಲಭ್ಯವಿರುತ್ತವೆ ಎನ್ನುವ ಮಾಹಿತಿ ಆಧರಿಸಿ ಮೋಡ ಬಿತ್ತನೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ಇದಕ್ಕಾಗಿ ಜಿಲ್ಲಾಧಿಕಾರಿಗಳು ಮತ್ತು ಕೇಂದ್ರ ಸರ್ಕಾರದ ಅನುಮತಿ ಪಡೆಯಲಾಗಿದೆ. ಸಚಿವರಾದ ಹೆಚ್.ಕೆ. ಪಾಟೀಲ, ಸತೀಶ್ ಜಾರಕಿಹೊಳಿ, ಸಂತೋಷ್ ಲಾಡ್, ಶಿವಾನಂದ ಪಾಟೀಲ, ಹಾವೇರಿ, ಧಾರವಾಡ ಜಿಲ್ಲೆಗಳ ಶಾಸಕರು ಈ ಕಾರ್ಯಕ್ಕೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದ್ದಾರೆ.