
ಬೆಂಗಳೂರು: ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಕಾನೂನು ಹೋರಾಟ ಆರಂಭಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ.
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಪರವಾಗಿ ನಿಲ್ಲುವ ಬಗ್ಗೆ ಶಾಸಕಾಂಗ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬೆಂಬಲಿಸಿ ಶಾಸಕರು ತೀರ್ಮಾನ ಕೈಗೊಳ್ಳಲಿದ್ದಾರೆ. ಈಗಾಗಲೇ ಸಚಿವರು ಮುಖ್ಯಮಂತ್ರಿ ಅವರ ಪರವಾಗಿ ನಿಂತಿದ್ದು, ಶಾಸಕರು ಕೂಡ ಸಿಎಂ ಪರವಾಗಿ ನಿಲ್ಲುವ ಸಾಧ್ಯತೆ ಇದೆ.
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿ ಪಕ್ಷಗಳಿಗೆ ಟಾರ್ಗೆಟ್ ಆಗಿದ್ದಾರೆ. ಕಾನೂನು ಮತ್ತು ರಾಜಕೀಯ ಹೋರಾಟ ನಡೆಸುತ್ತಿರುವ ಅವರಿಗೆ ಸಚಿವರು, ಪಕ್ಷದ ಸಹೋದ್ಯೋಗಿಗಳು ಬೆಂಬಲ ನೀಡಿದ್ದಾರೆ. ಇದೀಗ ಶಾಸಕರ ಸಂಪೂರ್ಣ ಬೆಂಬಲವಿದೆ ಎಂದು ಸಂದೇಶ ನೀಡಲು ಸಿ.ಎಲ್.ಪಿ. ಸಭೆ ಕರೆಯಲಾಗಿದೆ.
ಸಚಿವ ಸಂಪುಟದಲ್ಲಿ ರಾಜ್ಯಪಾಲರ ಪ್ರಾಸಿಕ್ಯೂಷನ್ ನಿರ್ಧಾರದ ವಿರುದ್ಧ ತೀರ್ಮಾನ ಕೈಗೊಂಡ ರೀತಿಯಲ್ಲಿಯೇ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಸಿದ್ದರಾಮಯ್ಯ ನಾಯಕತ್ವಕ್ಕೆ ಸಂಪೂರ್ಣ ಬೆಂಬಲ ನೀಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು ಎನ್ನಲಾಗಿದೆ.