ಬೆಂಗಳೂರು: ಕೆಪಿಸಿಸಿ ಕಚೇರಿ ಇಂದಿರಾ ಭವನದಲ್ಲಿ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಶಾಸಕಾಂಗ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಅವರನ್ನು ಆಯ್ಕೆ ಮಾಡಿರುವ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೇ ಘೋಷಣೆ ಮಾಡಿದ್ದಾರೆ. ಸಿ.ಎಲ್.ಪಿ. ಸಭೆಯಲ್ಲಿ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೆವಾಲಾ, ಎಐಸಿಸಿ ವೀಕ್ಷಕರು, ಶಾಸಕರು, ಸಂಸದರು ಭಾಗವಹಿಸಿದ್ದರು.
ಸಭೆಯಲ್ಲಿ ಸಿ.ಎಲ್.ಪಿ. ನಾಯಕರಾಗಿ ಸಿದ್ಧರಾಮಯ್ಯ ಅವರನ್ನು ಆಯ್ಕೆ ಮಾಡಿದ ಬಗ್ಗೆ ಡಿ.ಕೆ. ಶಿವಕುಮಾರ್ ನಿರ್ಣಯ ಮಂಡಿಸಿದ್ದು, ಅವರ ನಿರ್ಣಯವನ್ನು ಶಾಸಕರು ಅನುಮೋದಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾದ ಸಿದ್ಧರಾಮಯ್ಯ ಅವರನ್ನು ಅಭಿನಂದಿಸಲಾಗಿದೆ.
ಸಭೆ ಮುಗಿದ ನಂತರ ಸಿದ್ದರಾಮಯ್ಯ ಡಿ.ಕೆ. ಶಿವಕುಮಾರ್ ಹಾಗೂ ಪಕ್ಷದ ಶಾಸಕರು ರಾಜ್ಯಪಾಲರನ್ನು ಭೇಟಿಯಾಗಲಿದ್ದು, ಸರ್ಕಾರ ರಚನೆಗೆ ಹಕ್ಕು ಮಂಡಿಸಿ ಅನುಮತಿ ಕೇಳಲಿದ್ದಾರೆ,