ಚಿತ್ರದುರ್ಗ: ಚಿತ್ರದುರ್ಗದಲ್ಲಿ ಬಿಗ್ ಬಾಸ್ ಹೋಟೆಲ್ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದ 22 ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಫೋರ್ಟ್ ಸಿಟಿ ರಿಕ್ರಿಯೇಷನ್ ಕ್ಲಬ್ ಹೆಸರಲ್ಲಿ ಹೋಟೆಲ್ ನ 4ನೇ ಮಹಡಿಯಲ್ಲಿ ಜೂಜಾಟ ನಡೆಸಲಾಗುತ್ತಿತ್ತು, ಈ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಾಳಿ ಮಾಡಿದ್ದಾರೆ. ದಾಳಿಯ ವೇಳೆ 85,000 ರೂ. ಮೌಲ್ಯದ ಟೋಕನ್ ಗಳನ್ನು ವಶಕ್ಕೆ ಪಡೆಯಲಾಗಿದೆ. ಡಿವೈಎಸ್ಪಿ ದಿನಕರ್, ಸಿಪಿಐ ದೊಡ್ಡಣ್ಣ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ, ಚಿತ್ರದುರ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ,