ʼವಿಶ್ವ ಯೋಗ ದಿನಾಚರಣೆʼ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ. ಎರಡು ದಿನಗಳ ಕಾಲ ನರೇಂದ್ರ ಮೋದಿಯವರು ರಾಜ್ಯ ಪ್ರವಾಸ ಕೈಗೊಳ್ಳಲಿದ್ದು, ಇದಕ್ಕೂ ಮುನ್ನ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಕರೆ ಮಾಡಿದ ನರೇಂದ್ರ ಮೋದಿಯವರು ರಾಜ್ಯ ಪ್ರವಾಸ ಕುರಿತು ಚರ್ಚೆ ನಡೆಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ ಮೂಲಕ ಈ ಮಾತುಕತೆ ನಡೆದಿದ್ದು, ಈ ಸಂದರ್ಭದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳು ಉದ್ಘಾಟನೆ ಹಾಗೂ ಶಂಕುಸ್ಥಾಪನೆಗೆ ಪ್ರಸ್ತಾಪಿಸಲಾದ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದ್ದಾರೆ.
ಈ ಸಭೆ ನಂತರ ರಾಜ್ಯ ಸರ್ಕಾರದ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪ್ರಧಾನಿಗಳ ಭೇಟಿ ಕಾರ್ಯಕ್ರಮಕ್ಕೆ ಸಕಲ ರೀತಿಯ ಸಿದ್ಧತೆ ಮಾಡಿಕೊಳ್ಳಿ. ಯಾವುದೇ ರೀತಿಯ ಲೋಪಗಳು ಆಗದಂತೆ ಮುನ್ನೆಚ್ಚರಿಕೆ ವಹಿಸಿ ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.